ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಿಯೊ ಸೋರಿಕೆ ಪ್ರಕರಣದಲ್ಲಿ ಇಮ್ರಾನ್‌ ವಿರುದ್ಧ ಕಾನೂನು ಕ್ರಮಕ್ಕೆ ಅನುಮೋದನೆ

Last Updated 2 ಅಕ್ಟೋಬರ್ 2022, 12:27 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಆಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಪಾಕಿಸ್ತಾನದ ಸಚಿವ ಸಂಪುಟ ಭಾನುವಾರ ಔಪಚಾರಿಕವಾಗಿ ಅನುಮೋದನೆ ನೀಡಿದೆ.

ಆಡಿಯೊ ಸೋರಿಕೆಗೆ ಬಗ್ಗೆ ಪರಿಶೀಲನೆ ನಡೆಸಲು ಈಚೆಗೆ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಇಮ್ರಾನ್‌ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು.

‘ಈ ವಿಚಾರವು ರಾಷ್ಟ್ರದ ಭದ್ರತೆಗೆ ಸಂಬಂಧಿಸಿದ್ದಾಗಿದ್ದು, ಕಾನೂನು ಕ್ರಮ ಅಗತ್ಯ’ ಎಂದು ಸಮಿತಿ ಹೇಳಿದೆ.

ಇಮ್ರಾನ್‌ ಖಾನ್‌, ಮಾಜಿ ಸಚಿವ ಅಸಾದ್‌ ಉಮರ್‌ ಮತ್ತು ಮುಖ್ಯ ಕಾರ್ಯದರ್ಶಿ ಆಜಂ ಖಾನ್‌ ಅವರು ಅಮೆರಿಕದ ಪತ್ರದ ಬಗ್ಗೆ ಚರ್ಚಿಸುತ್ತಿರುವ ಎರಡು ಆಡಿಯೊಗಳು ಸೋರಿಕೆಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT