ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

Last Updated 18 ಅಕ್ಟೋಬರ್ 2022, 2:16 IST
ಅಕ್ಷರ ಗಾತ್ರ

ನವದೆಹಲಿ, ಅಮೃತಸರ: ಪಂಜಾಬ್‌ನ ಭಾರತ– ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಸೋಮವಾರ ಭಾರತದ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್‌) ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದೆ.

‘ಸೋಮವಾರ ರಾತ್ರಿ 8.30ರ ವೇಳೆಗೆ 183ನೇ ಬೆಟಾಲಿಯನ್‌ನ ಬಿಎಸ್‌ಎಫ್ ಪಡೆಗಳು ಪಂಜಾಬ್‌ನ ಅಮೃತಸರ ಸೆಕ್ಟರ್‌ನ ಗಡಿ ಪೋಸ್ಟ್ ಕಲಾಂ ಡೋಗರ್‌ನ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದವು’ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

ಗಡಿಭಾಗದಲ್ಲಿ ಸತತ ನಾಲ್ಕನೇ ದಿನ ಮೂರನೇ ಬಾರಿ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಪ್ರಕರಣ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT