ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನ್ನ ವೈಫಲ್ಯದಿಂದ ಗಮನ ಸೆಳೆಯಲು ಭಾರತದ ವಿರುದ್ಧ ಪಾಕ್ ಅಪಪ್ರಚಾರ

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯಲ್ಲಿ ಉಲ್ಲೇಖ
Last Updated 13 ಮಾರ್ಚ್ 2023, 14:09 IST
ಅಕ್ಷರ ಗಾತ್ರ

ನವದೆಹಲಿ: ‘ಪಾಕಿಸ್ತಾನವು ತನ್ನಲ್ಲಿನ ರಾಜಕೀಯ ಮತ್ತು ಆರ್ಥಿಕ ವೈಫಲ್ಯಗಳಿಂದ ಜನರ ಗಮನವನ್ನು ಇತರೆಡೆಗೆ ಸೆಳೆಯಲು ಭಾರತದ ವಿರುದ್ಧ ಕಟ್ಟು ಕಥೆ ಅಥವಾ ಅಪಪ್ರಚಾರದಲ್ಲಿ ತೊಡಗಿಕೊಂಡಿದೆ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು 2022ರ ತನ್ನ ವಾರ್ಷಿಕ ವರದಿಯಲ್ಲಿ ಸೋಮವಾರ ಹೇಳಿದೆ.

‘ಪಾಕಿಸ್ತಾನದೊಂದಿಗೆ ಭಾರತವು ಸಾಮಾನ್ಯ ನೆರೆಯ ಸಂಬಂಧವನ್ನಷ್ಟೇ ಬಯಸುತ್ತದೆ. ಭಯೋತ್ಪಾದನೆ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಯಾವುದೇ ವಿಚಾರವವನ್ನು ದ್ವಿಪಕ್ಷೀಯವಾಗಿ ಶಾಂತಿಯುತ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ಭಾರತದ ಸ್ಥಿರವಾದ ನಿಲುವು. ಅಂತಹ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿಯು ಪಾಕಿಸ್ತಾನದ ಮೇಲಿದೆ’ ಎಂದೂ ಸಚಿವಾಲಯ ಅಭಿಪ್ರಾಯಪಟ್ಟಿದೆ.

‘ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಯಾವುದೇ ಕಡಿವಾಣ ಹಾಕಿಲ್ಲ. 26/11ರ ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರ ಕುಟುಂಬಗಳಿಗೆ ನ್ಯಾಯ ಒದಗಿಸುವಲ್ಲಿ ಇಸ್ಲಾಮಾಬಾದ್ ಪ್ರಾಮಾಣಿಕತೆಯಿಂದ ನಡೆದುಕೊಂಡಿಲ್ಲ’ ಎಂದು ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT