ಶನಿವಾರ, ಡಿಸೆಂಬರ್ 4, 2021
20 °C

ಭಾರತದ ರಾಜತಾಂತ್ರಿಕ ಅಧಿಕಾರಿಗೆ ಪಾಕ್‌ ಸಮನ್ಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹೈಕಮಿಷನ್‌ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಯಿಸಿಕೊಂಡು ಭಾನುವಾರ ಪ್ರತಿಭಟನೆ ದಾಖಲಿಸಿದೆ.

ಪಾಕ್‌ ನಾಗರಿಕರನ್ನು ಗುರಿಯಾಗಿಸಿಕೊಂಡು ನಿರಂತದ ದಾಳಿ ನಡೆಸಲಾಗುತ್ತಿದೆ. ಕಳೆದ ಶನಿವಾರ ಭಾರತೀಯ ಪಡೆಗಳು ರಾಚಿಕಿರಿ ವಲಯಗಳಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

ಈ ವರ್ಷ ಭಾರತ 2,158 ಬಾರಿ ಕದನವಿರಾಮ ಉಲ್ಲಂಘಿಸಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. 168 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಆರೋಪಿಸಿದೆ. 

2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸಬೇಕು. ಮೇಲಿಂದ ಮೇಲೆ ನಡೆಯುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ವಿದೇಶಾಂಗ ಕಚೇರಿ ಒತ್ತಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು