ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ರಾಜತಾಂತ್ರಿಕ ಅಧಿಕಾರಿಗೆ ಪಾಕ್‌ ಸಮನ್ಸ್‌

Last Updated 6 ಸೆಪ್ಟೆಂಬರ್ 2020, 11:37 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌:ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹೈಕಮಿಷನ್‌ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಯಿಸಿಕೊಂಡು ಭಾನುವಾರ ಪ್ರತಿಭಟನೆ ದಾಖಲಿಸಿದೆ.

ಪಾಕ್‌ ನಾಗರಿಕರನ್ನು ಗುರಿಯಾಗಿಸಿಕೊಂಡು ನಿರಂತದ ದಾಳಿ ನಡೆಸಲಾಗುತ್ತಿದೆ. ಕಳೆದ ಶನಿವಾರ ಭಾರತೀಯ ಪಡೆಗಳುರಾಚಿಕಿರಿ ವಲಯಗಳಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

ಈ ವರ್ಷ ಭಾರತ 2,158 ಬಾರಿ ಕದನವಿರಾಮ ಉಲ್ಲಂಘಿಸಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. 168 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಆರೋಪಿಸಿದೆ.

2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸಬೇಕು. ಮೇಲಿಂದ ಮೇಲೆ ನಡೆಯುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ವಿದೇಶಾಂಗ ಕಚೇರಿ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT