ಬುಧವಾರ, ಏಪ್ರಿಲ್ 14, 2021
31 °C

ಪಾಕಿಸ್ತಾನದಿಂದ 17 ಭಾರತೀಯ ಮೀನುಗಾರರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕರಾಚಿ: ಪಾಕಿಸ್ತಾನದ ಜಲ ಗಡಿ ಪ್ರವೇಶಿಸಿದ ಆರೋಪದ ಮೇಲೆ 17 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.

‘ಮೂರು ಬೋಟ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಮೀನುಗಾರರನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ, ಸ್ಥಳೀಯ ಬಂದರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ’ ಎಂದು ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.

ಪಾಕ್‌ ಜಲ ಗಡಿ ಪ್ರವೇಶಿಸುತ್ತಿದ್ದಂತೆ ಮೀನುಗಾರರಿಗೆ ದೂರ ಹೋಗುವಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ, ಅವರು ಕಿವಿಗೊಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಮೀನುಗಾರರನ್ನು ಕರಾಚಿಯ ಮಾಲಿರ್ ಅಥವಾ ಲಾಂಧಿ ಜೈಲಿಗೆ ಕಳುಹಿಸಲಾಗುತ್ತದೆ. ವರ್ಷದ ಹಿಂದೆ ಜಲಗಡಿ ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನವು 23 ಭಾರತೀಯರನ್ನು ಬಂಧಿಸಿ, ನಾಲ್ಕು ಬೋಟ್‌ಗಳನ್ನು ಪಾಕ್‌ ವಶಕ್ಕೆ ಪಡೆದಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು