ಬುಧವಾರ, ನವೆಂಬರ್ 25, 2020
19 °C

ಪಾಕ್‌ ಸೇನೆಯಿಂದ ಕದನ ವಿರಾಮ ಉಲ್ಲಂಘನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ‍ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನಿ ಸೇನೆಯು ಗಡಿ ಭದ್ರತಾ ಪಡೆ ಮತ್ತು ಗ್ರಾಮಗಳನ್ನು ಗುರಿಯಾಗಿಸಿ ಐದು ಕಡೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

ಈ ಮೂಲಕ ಪಾಕಿಸ್ತಾನದ ಸೇನೆಯು ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್‌ ಸೇನೆಯು ಹಿರಾನಗರ ವಲಯದ ಚಾಂದ್ಮಾ, ಫಕೀರಾ, ಲೋಂಡಿ, ಸತ್ಪಾಲ್ ಮತ್ತು ಕರೋಲ್ ಕೃಷ್ಣ ಗ್ರಾಮಗಳಲ್ಲಿ ಸೋಮವಾರ ರಾತ್ರಿ 9.45ರ ಸುಮಾರಿಗೆ ಅಪ್ರಚೋದಿತ ದಾಳಿ ನಡೆಸಿದ್ದು, ಬಿಎಸ್‌ಎಫ್‌ ಕೂಡ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸೋಮವಾರ ರಾತ್ರಿ 9.45 ರಿಂದ ಮಂಗಳವಾರ ಬೆಳಿಗ್ಗೆ 4.25 ತನಕ ಗುಂಡಿನ ಚಕಮಕಿ ನಡೆದಿದ್ದು, ಸ್ಥಳೀಯರು ಭೂಗತ ಬಂಕರ್‌ಗಳಲ್ಲಿ ರಾತ್ರಿ ಕಳೆಯಬೇಕಾಯಿತು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು