ಶನಿವಾರ, ಫೆಬ್ರವರಿ 4, 2023
18 °C

ಪಾಕ್‌ನಿಂದ ಭಾರಿ ಮಾದಕ ವಸ್ತುಗಳ ರವಾನೆ: ಡಿಜಿಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮ್ಮು: ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ಸಲುವಾಗಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದು, ಈ ಕೃತ್ಯಕ್ಕೆ ಇಲ್ಲಿನ ಯುವಕರು ಬಲಿಪಶುಗಳಾಗುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್‌ಬಾಗ್‌ ಸಿಂಗ್‌ ಹೇಳಿದರು.

ಮಾದಕವಸ್ತು ನಿಯಂತ್ರಣ ಬ್ಯುರೋ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುರುವಾರ (ನ.25) ಜಾಗರ್‌ ಕೋಟ್ಲಿಯಲ್ಲಿ 52 ಕೆ.ಜಿ ಹೆರಾಯಿನ್‌ ಸಿಕ್ಕಿದೆ. ಅಲ್ಲದೇ ಇದಕ್ಕೂ ಮುನ್ನ ಪೂಂಚ್‌, ಬಾರಾಮುಲ್ಲಾ, ಕುಪ್ವಾರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಹೆರಾಯಿನ್‌ ದೊರೆತಿದೆ. ಮಾದಕ ವಸ್ತು ಪೂರೈಕೆಗಾಗಿ ಯೋಜಿತ ತಯಾರಿ ನಡೆಸಿರುವ ಪಾಕಿಸ್ತಾನವು ತನ್ನ ದುರುದ್ದೇಶಗಳಿಗೆ ಇಲ್ಲಿನ ಯುವಕರನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ಎನ್‌ಡಿಪಿಎಸ್‌ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಪಡಿಸುವ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪೊಲೀಸರು ವೃತ್ತಿಪರವಾಗಿ ಕಾರ್ಯ ನಿರ್ವಹಿಸಬೇಕು. ಅಂತರರಾಜ್ಯ ಮಾದಕವಸ್ತು ಜಾಲವನ್ನು ಗುರುತಿಸಬೇಕು ಎಂದು ಸೂಚಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು