ಮಂಗಳವಾರ, ಸೆಪ್ಟೆಂಬರ್ 21, 2021
22 °C
ಜಮ್ಮು-ಕಾಶ್ಮೀರ

ಪಾಕ್‌ನಿಂದ ಡ್ರೋನ್ ಮೂಲಕ ಉಗ್ರರಿಗೆ ನೆರವು: ಪೊಲೀಸ್ ಮಹಾನಿರ್ದೇಶಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಭಾರತ–ಪಾಕಿಸ್ತಾನ ಗಡಿ ಸಮೀಪ ಈಚೆಗೆ ಉಗ್ರರಿಗೆ ಡ್ರೋನ್‌ ಮೂಲಕ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಸಾಗಿಸಲು ಪಾಕಿಸ್ತಾನ ನೆರವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್‌ ಸಿಂಗ್‌ ಭಾನುವಾರ ಆರೋಪಿಸಿದ್ದಾರೆ.

ಜಮ್ಮು ಪ್ರದೇಶದ ಜನದಟ್ಟಣೆಯ ಮಾರುಕಟ್ಟೆ ಉಗ್ರರ ಗುರಿಯಾಗಿತ್ತು. ಫೆಬ್ರುವರಿಯಲ್ಲಿ ನಡೆದ ಕದನವಿರಾಮ ಒಪ್ಪಂದದ ಹೊರತಾಗಿಯೂ ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳ ಸರಬರಾಜು ಮಾರ್ಗಗಳನ್ನು ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಭದ್ರತಾಪಡೆಗಳ ಕಾರ್ಯಾಚರಣೆಯ ಫಲವಾಗಿ ಲಷ್ಕರ್‌ ಎ ತಯಬಾ (ಎಲ್‌ಇಟಿ) ಮತ್ತು ಜೈಶ್‌ ಎ ಮೊಹಮ್ಮದ್‌ (ಜೆಇಎಂ) ಭಯೋತ್ಪಾದಕ ಸಂಘಟನೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಕೊರತೆಯನ್ನು ಎದುರಿಸುತ್ತಿವೆ ಎಂದಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಉಗ್ರರಿಗೆ ಡ್ರೋನ್‌ ಮೂಲಕ ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಹಣವನ್ನು ಪಾಕಿಸ್ತಾನದಿಂದ ಸಾಗಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

ಜುಲೈ23ರಂದು ಅಂತರರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್‌ ಅನ್ನು ಪೊಲೀಸರು ಹೊಡೆದುರುಳಿಸಿದ್ದರು. ಇದರಲ್ಲಿ 5 ಕೆ.ಜಿ. ಐಇಡಿ ಪತ್ತೆಯಾಗಿತ್ತು.

ಪೊಲೀಸರು ಹೊಡೆದುರಳಿಸಿದ ಡ್ರೋನ್‌ನ ಬಿಡಿಭಾಗಗಳು ಚೀನಾ ಮತ್ತು ತೈವಾನ್‌ ನಿರ್ಮಿತ ಎಂದು ದಿಲ್‌ಬಾಗ್‌ ಸಿಂಗ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು