ಜಮ್ಮು–ಕಾಶ್ಮೀರ: ಪಾಕ್ ಸೇನೆಯಿಂದ ಗುಂಡಿನ ದಾಳಿ

ಜಮ್ಮು: ‘ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಹಿರಾನಗರ ಸೆಕ್ಟರ್‌ನ ಬೊಬಿಯಾ ಪ್ರದೇಶದಲ್ಲಿ ಶನಿವಾರ ರಾತ್ರಿ 10.25ಕ್ಕೆ ಪಾಕಿಸ್ತಾನಿ ಸೇನೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಗಡಿ ಭದ್ರತಾ ಪಡೆಯು(ಬಿಎಸ್‌ಎಫ್) ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಅವರು ಹೇಳಿದರು.
‘ಭಾನುವಾರ ಬೆಳಿಗ್ಗೆ 4.30 ರ ತನಕ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಯಾವುದೇ ಪ್ರಾಣ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ’ ಎಂದು ಅವರು ಮಾಹಿತಿ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.