ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಧು ಪರವಾಗಿ ಪಾಕ್ ಪ್ರಧಾನಿ ಲಾಬಿ: ಅಮರಿಂದರ್ ಸಿಂಗ್ ಆರೋಪ

Last Updated 25 ಜನವರಿ 2022, 4:23 IST
ಅಕ್ಷರ ಗಾತ್ರ

ನವದೆಹಲಿ: ‘ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಸರ್ಕಾರದ ಸಂಪುಟದಿಂದ ತೆಗೆದಾಗ, ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಲಾಬಿ ನಡೆಸಿದ್ದರು’ ಎಂದು ಪಂಜಾಬ್‌ ಲೋಕ ಕಾಂಗ್ರೆಸ್‌ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆರೋಪಿಸಿದ್ದಾರೆ.

ಪಂಜಾಬ್ ಚುನಾವಣೆಗೆ ಅಮರಿಂದರ್ ಅವರ ಪಕ್ಷವು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಅವರು ಈ ಆರೋಪ ಮಾಡಿದ್ದಾರೆ.

‘ಸಿಧು ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟ ನಂತರ ನನಗೆ ಪಾಕಿಸ್ತಾನದ ಪ್ರಧಾನಿಯಿಂದ ಸಂದೇಶ ಬಂದಿತ್ತು. ಸಿಧು ಅವರು ನನ್ನ ಗೆಳೆಯ, ಅವರನ್ನು ಸಂಪುಟಕ್ಕೆ ಮರಳಿ ಸೇರಿಸಿಕೊಂಡರೆ ನನಗೆ ಸಂತೋಷವಾಗುತ್ತದೆ. ಸಿಧು ಕೆಲಸ ಮಾಡದೇ ಇದ್ದರೆ, ಆಗ ನೀವು ಅವರನ್ನು ತೆಗೆದುಹಾಕಬಹುದು ಎಂದು ಇಮ್ರಾನ್ ಖಾನ್ ಹೇಳಿದ್ದರು’ ಎಂದು ಅಮರಿಂದರ್ ಆರೋಪಿಸಿದ್ದಾರೆ.

ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿಧು ಹೋಗಿದ್ದರು. ಆಗ ಪಾಕ್ ಸೇನಾ ಮುಖ್ಯಸ್ಥ ಬಾಜ್ವಾ ಅವರನ್ನು ಸಿಧು ಅಪ್ಪಿಕೊಂಡಿದ್ದರು. ಆಗ ಆ ಬಗ್ಗೆ ಅಮರಿಂದರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT