ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

Last Updated 10 ಮಾರ್ಚ್ 2023, 13:59 IST
ಅಕ್ಷರ ಗಾತ್ರ

ನವದೆಹಲಿ/ಗುರುದಾಸ್‌ಪುರ: ‘ಎಕೆ ಸರಣಿಯ ಬಂದೂಕುಗಳು ಹಾಗೂ ಮೂರು ಡಜನ್‌ ಸುತ್ತಿಗಿಂತಲೂ ಹೆಚ್ಚಿನ ಮದ್ದುಗುಂಡುಗಳನ್ನು ಹೊತ್ತು ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನದ ಡ್ರೋನ್‌ ಅನ್ನು ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ ಬಳಿ ಬಿಎಸ್‌ಎಫ್‌ ಯೋಧರು ಹೊಡೆದುರುಳಿಸಿದ್ದಾರೆ’ ಎಂದು ವಕ್ತಾರರೊಬ್ಬರು ತಿಳಿಸಿದ್ದಾರೆ.

‘ಗುರದಾಸ್‌ಪುರ ಜಿಲ್ಲೆಯ ಮೆಟ್ಲಾ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಈ ಡ್ರೋನ್‌ ಅನ್ನು ಯೋಧರು ಪ್ರತಿಬಂಧಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಈ ಬಂದೂಕು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT