ಕಾಶ್ಮೀರ: ಪೂಂಚ್‌ನಲ್ಲಿ ಪಾಕ್ ನುಸುಳುಕೋರನ ಬಂಧನ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನದ ನುಸುಳುಕೋರನನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ.
ಗುಲ್ಪುರ ವ್ಯಾಪ್ತಿಯ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕಣ್ಣಿಟ್ಟಿದ್ದ ಸೇನಾ ಪಡೆ, ಅನುಮಾನಸ್ಪದವಾಗಿ ಓಡಾಡಿಕೊಂಡು ಒಳನುಗ್ಗುಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ತಡೆದು, ಬಂಧಿಸಿದೆ. ನುಸುಳುಕೋರನನ್ನು ವಿಚಾರಣೆಗೆ ಒಳಪಡಿಸಿದ್ದು, ಆತ ಪಾಕಿಸ್ತಾನದ ಚೋಪುರದ ಜಾವೈದ್ ಎಂದು ಗುರುತಿಸಲಾಗಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.