ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದೊಳಗೆ ನುಸುಳಲು ಯತ್ನಿಸಿದ್ದ ಪಾಕ್ ನುಸುಳುಕೋರನ ಬಂಧನ

Last Updated 21 ಆಗಸ್ಟ್ 2022, 10:43 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಭಾರತೀಯ ಸೇನೆ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ನೌಶೇರಾ ಸೆಕ್ಟೆರ್‌ನ ಜಂಗರ್ ಪ್ರದೇಶದ ಗಡಿಯಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತ್ತು.

ಬಳಿಕ ನಡೆಸಿದ ಗುಂಡಿನ ದಾಳಿಯಲ್ಲಿ ನುಸುಳುಕೋರ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನುಸುಳುಕೋರನನ್ನು ಬಂಧಿಸಲಾಗಿದ್ದು, ವೈದ್ಯಕೀಯ ನೆರವಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT