ಜಮ್ಮು: ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಜಮ್ಮು: ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಸೋಮವಾರ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್‌ನ ಚಕ್ ಫಕ್ವಿರಾ ಗಡಿ ಪೋಸ್ಟ್ ಬಳಿ ಬೆಳಿಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ’ ಎಂದು ಅವರು ತಿಳಿಸಿದ್ದಾರೆ.
‘ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ನುಸುಳುಕೋರ, ಗಡಿ ದಾಟಲು ಪ್ರಯತ್ನಿಸಿದ. ಅಂತರರಾಷ್ಟ್ರೀಯ ಗಡಿಯಿಂದ 40 ಮೀಟರ್ ದೂರದಲ್ಲಿ ಭಾರತದ ಒಳಗೆ ಅವನ ಮೃತ ದೇಹ ಪತ್ತೆಯಾಗಿದೆ’ ಎಂದು ಬಿಎಸ್‌ಎಫ್ ವಕ್ತಾರ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.