ಸೋಮವಾರ, ಆಗಸ್ಟ್ 15, 2022
28 °C

ಗಡಿಯತ್ತ ನುಗ್ಗಲು ಬಂದ ಪಾಕ್‌ ವ್ಯಕ್ತಿ ಬಿಎಸ್ಎಫ್‌ ಗುಂಡಿಗೆ ಬಲಿ

ಪಿಟಿಐ/ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್‌ಎಫ್ ಪಡೆಯು ಜಮ್ಮುವಿನ ಅಂತರರಾಷ್ಟ್ರೀಯ ಗಡಿಯ ಸಮೀಪ ಹೊಡೆದುರುಳಿಸಿದೆ.

ಗಡಿಯಲ್ಲಿ ತಡೆ ಬೇಲಿಯನ್ನು ದಾಟುವ ಉದ್ದೇಶದಿಂದ ಮುಂದೆ ಬರುತ್ತಿದ್ದ ವ್ಯಕ್ತಿಗೆ ಎಚ್ಚರಿಕೆ ನೀಡಿದರೂ ನಿಲ್ಲದ ಕಾರಣ, ಭದ್ರತಾ ಸಿಬ್ಬಂದಿ ಮೂರು ಸುತ್ತು ಗುಂಡು ಹಾರಿಸಿರುವುದಾಗಿ ಬಿಎಸ್‌ಎಫ್‌ ವಕ್ತಾರರು ತಿಳಿಸಿದ್ದಾರೆ.

'ಪಾಕಿಸ್ತಾನದ ಕಡೆಯಿಂದ ವ್ಯಕ್ತಿಯೊಬ್ಬ ವೇಗವಾಗಿ ಗಡಿ ಬೇಲಿಯ ಕಡೆಗೆ ಬರುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಆತನನ್ನು ಅಲ್ಲಿಯೇ ನಿಲ್ಲುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ, ಆತ ನಿಲ್ಲದೆ ಮುಂದೆ ಬಂದಿದ್ದಾನೆ' ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ–

ನುಸುಳುತ್ತಿದ್ದ ವ್ಯಕ್ತಿಯ ಮೃತ ದೇಹವನ್ನು ಸೋಮವಾರ ಬೆಳಿಗ್ಗೆ ಪೊಲೀಸರಿಗೆ ಒಪ್ಪಿಸಲಾಗಿದೆ. ಆತನಿಂದ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದಿದ್ದಾರೆ.

ಜೂನ್‌ 30ರಿಂದ ಅಮರನಾಥ ಯಾತ್ರೆ ಶುರುವಾಗುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು