ಜಮ್ಮು: ಪಾಕಿಸ್ತಾನ ಸೇನೆಯು ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಶುಕ್ರವಾರ ರಾತ್ರಿ 9.50 ಸುಮಾರಿಗೆ ಕಠುವಾ ಜಿಲ್ಲೆಯ ಹೀರಾನಗರ ಸೆಕ್ಟರ್ ವ್ಯಾಪ್ತಿಯ ಪನ್ಸಾರ್ ಬಳಿಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಕೂಡ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದರು.

‘ಎರಡೂ ದೇಶಗಳ ಪಡೆಗಳ ನಡುವೆ ಶನಿವಾರ ಬೆಳಿಗ್ಗೆ 3.35 ತನಕ ಗುಂಡಿನ ಚಕಮಕಿ ನಡೆಯಿತು. ನಮ್ಮ ಕಡೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ’ ಎಂದು ಅವರು ಮಾಹಿತಿ ನೀಡಿದರು.

ಪಾಕಿಸ್ತಾನ ಸೇನೆ ಗುರ್ನಂ ಮತ್ತು ಕರೋಲ್ ಕೃಷ್ಣಾ ಗಡಿ ಭಾಗಗಳಲ್ಲೂ ಗುಂಡಿನ ದಾಳಿ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.