ಸೋಮವಾರ, ಸೆಪ್ಟೆಂಬರ್ 20, 2021
27 °C

ಪಾಕಿಸ್ತಾನದ ಉಗ್ರ ಸಂಘಟನೆಗಳಿಂದ ಕಾಶ್ಮೀರದಲ್ಲಿ ಭಾರಿ ದಾಳಿಗೆ ಸಿದ್ಧತೆ: ಡಿಜಿಪಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಪಾಕಿಸ್ತಾನದ ಉಗ್ರ ಸಂಘಟನೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ದುಷ್ಕೃತ್ಯ ನಡೆಸಲು ಪ್ರಯತ್ನಿಸುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್‌ ಸಿಂಗ್‌ ಬುಧವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಂಗ್‌, ʼಜಮ್ಮು ಕಾಶ್ಮೀರದಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಲು ಪಾಕಿಸ್ತಾನಿ ಉಗ್ರ ಸಂಘಟನೆಗಳು ಪ್ರಯತ್ನಿಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮ ಪಡೆಗಳು ಎಚ್ಚರವಾಗಿವೆ.  ಪೊಲೀಸರು, ಗುಪ್ತಚರ ಏಜೆನ್ಸಿ ಮತ್ತು ರಕ್ಷಣಾ ಪಡೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ನಾವು ಅಂತಹ ಯಾವುದೇ ದುಷ್ಕೃತ್ಯಗಳನ್ನು ಹಿಮ್ಮೆಟ್ಟಿಸುತ್ತೇವೆ ಎಂಬ ವಿಶ್ವಾಸವಿದೆʼ ಎಂದು ತಿಳಿಸಿದ್ದಾರೆ.

ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೆಕ್ಟರ್‌ನಲ್ಲಿರುವ ತರ್ಬಲ್‌ ಹಳ್ಳಿಯಲ್ಲಿ ಬುಧವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದರು.

ʼಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಅನುಸಾರ ತರ್ಬಲ್‌ನಲ್ಲಿ ಸಂಜೆ 6:30ಕ್ಕೆ  ಹುಡುಕು ಕಾರ್ಯಾಚರಣೆ ಆರಂಭಿಸಲಾಯಿತುʼ ಎಂದು ಸೇನೆ ತಿಳಿಸಿತ್ತು.

ಕಾರ್ಯಾಚರಣೆ ವೇಳೆ ಮೂರು ಎಕೆ-47, ಹನ್ನೆರಡು ಎಕೆ-47 ಮ್ಯಾಗಜಿನ್‌ಗಳು, 2 ಪಿಸ್ತೂಲ್‌ ಮತ್ತು 4ಪಿಸ್ತೂಲ್‌ ಮ್ಯಾಗಜಿನ್‌ಗಳು ಹಾಗೂ 16 ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪಾಕಿಸ್ತಾನದ ದಿನಪತ್ರಿಕೆ ʼದುನಿಯಾʼದ ಒಂದು ಶೀಟ್‌ ಮತ್ತು ಆ ದೇಶದಲ್ಲಿ ತಯಾರಾದ ತಿನಿಸುಗಳೂ ಸ್ಥಳದಲ್ಲಿ ಪತ್ತೆಯಾಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು