ಬುಧವಾರ, ಜೂನ್ 16, 2021
23 °C

ಗಡಿಯಲ್ಲಿ ಪಾಕ್ ಸೇನೆಯಿಂದ ಮುಂದುವರಿದ ಶೆಲ್ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಮುಂದುವರಿದಿದ್ದು, ಸೋಮವಾರವೂ ಗುಂಡಿನ ದಾಳಿ ನಡೆಸಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಅಪ್ರಚೋಚಿತ ಗುಂಡಿನ ದಾಳಿಯು ಬಾಲಾಕೋಟ್ ವಲಯದಲ್ಲಿ ಬೆಳಿಗ್ಗೆ10.15 ಗಂಟೆಗೆ ಆರಂಭವಾಗಯಿತು. ಗಡಿ ಭಾಗದಲ್ಲಿ ನಿಯೋಜಿತರಾಗಿದ್ದ ಭಾರತೀಯ ಸೇನೆಯ ಸಿಬ್ಬಂದಿಯೂ ಇದಕ್ಕೆ ಪ್ರತ್ಯುತ್ತರ ನೀಡಿದ್ದಾರೆ. ಗುಂಡಿನ ದಾಳಿಯಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಸೇನೆಯ ಯೋಧರು ತಾರ್ಕುಂದಿ ಗ್ರಾಮವನ್ನು ಗುರಿಯಾಗಿಸಿ ಶೆಲ್ ದಾಳಿ ನಡೆಸಿದ್ದು, ಗ್ರಾಮಸ್ಥರಲ್ಲಿ ಭೀತಿಯನ್ನು ಉಂಟು ಮಾಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಭಾನುವಾರ ಮಾನ್ಕೊಟ್, ಶಾಪುರ್, ಕಿರ್ನಿ ಮತ್ತು ಕೃಷ್ಣ ಘಾಟಿ ವಲಯದಲ್ಲಿ ಭಾರಿ ಪ್ರಮಾಣದಲ್ಲಿ ಶೆಲ್ ದಾಳಿ ನಡೆಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು