ಶನಿವಾರ, ಡಿಸೆಂಬರ್ 5, 2020
19 °C

ಕದನ ವಿರಾಮ ಉಲ್ಲಂಘನೆ, ಪಾಕ್‌ ಪಡೆಯಿಂದ ಗುಂಡಿನ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ‌‌ಪೂಂಚ್‌, ಕಥುವಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಹಾಗೂ ಅಂತರರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್‌ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಮನಕೋಟ್‌ ಸೆಕ್ಟರ್‌ನಲ್ಲಿ ಮಧ್ಯರಾತ್ರಿ 2.30ರಿಂದ ಶೆಲ್‌ ದಾಳಿ ಆರಂಭವಾಗಿದೆ. ಅಂತರರಾಷ್ಟ್ರೀಯ ಗಡಿ ರೇಖೆಯ ಹಿರಾನಗರ್‌ ಸೆಕ್ಟರ್‌ನಲ್ಲೂ ರಾತ್ರಿಯಿಡೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.

ಇಲ್ಲಿಯವರೆಗಿನ ವರದಿ ಪ್ರಕಾರ ಭಾರತೀಯ ಸೇನೆ ಕಡೆ ಯಾವುದೇ ಪ್ರಾಣಹಾನಿ ಅಥವಾ ಗಾಯ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು