ಗುರುವಾರ , ಫೆಬ್ರವರಿ 9, 2023
30 °C

ಉತ್ತರ ಪ್ರದೇಶ: ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು ಪತ್ತೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು ಕಾಣಿಸಿಕೊಂಡಿದ್ದು, ಅಚ್ಚರಿಗೆ ಕಾರಣವಾಗಿದೆ.

ಈ ವಿಷಯ ಬೆಳಕಿಗೆ ಬಂದ ಬಳಿಕ ಜಿಲ್ಲಾಡಳಿತವು ಮತದಾರರ ಪಟ್ಟಿಯಿಂದ ಪಾಕಿಸ್ತಾನಿ ಮಹಿಳೆಯ ಹೆಸರನ್ನು ತೆಗೆದು ಹಾಕಿದೆ.

ಈ ಕುರಿತು ಸುದ್ದಿಸಂಸ್ಥೆ 'ಇಂಡಿಯಾ ಟುಡೇ' ವರದಿ ಮಾಡಿದೆ.

ಇದನ್ನೂ ಓದಿ: 

ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ಪ್ರಕಾರ, ಸಾಬಾ ಪರ್ವೀನ್ ಎಂಬ ಮಹಿಳೆ 2005ರಲ್ಲಿ ನದೀಂ ಅಹಮ್ಮದ್ ಎಂಬವರನ್ನು ಮದುವೆಯಾಗಿದ್ದರು. ಬಳಿಕ ದೀರ್ಘಾವಧಿಯ ವೀಸಾದಲ್ಲಿ ಪಾಕ್‌ಬಡಾ ಪಂಚಾಯಿತಿಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

2017ರಲ್ಲಿ ನಗರ ಪಂಚಾಯಿತಿ ಚುನಾವಣೆ ನಡೆದಾಗ ಆಕೆಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ ಕಾನೂನಿನ ಪ್ರಕಾರ ಆಕೆಯ ಹೆಸರನ್ನು ಸೇರಿಸಲು ಸಾಧ್ಯವಿಲ್ಲ.

ಇತ್ತೀಚೆಗೆ ಮತದಾರರ ಪಟ್ಟಿ ಪರಿಶೀಲನೆ ವೇಳೆ ವಿಷಯ ಬೆಳಕಿಗೆ ಬಂದಿದೆ. ಈಗ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲಾಗಿದೆ. ಅಲ್ಲದೆ ತಪ್ಪಿತ್ತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು