ಭಾನುವಾರ, ಮಾರ್ಚ್ 7, 2021
32 °C

ಹೆಣ್ಣು ಮಕ್ಕಳ ವಿವಾಹದ ಪ್ರಾಪ್ತ ವಯಸ್ಸಿನ ಪರಿಷ್ಕರಣೆ: ವರದಿ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹೆಣ್ಣು ಮಕ್ಕಳ ವಿವಾಹದ ಪ್ರಾಪ್ತ ವಯಸ್ಸಿನ ಬಗ್ಗೆ ಅಧ್ಯಯನ ನಡೆಸಲು ರಚನೆಯಾಗಿರುವ ಸಮಿತಿಯು ಪ್ರಧಾನ ಮಂತ್ರಿಗಳ ಕಾರ್ಯಾಲಯ (ಪಿಎಂಒ) ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ’ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಹೆಣ್ಣು ಮಕ್ಕಳ ಮದುವೆಯ ವಯಸ್ಸನ್ನು ಹೆಚ್ಚಿಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ ಎಂದೂ ಹೇಳಲಾಗಿದೆ. ಪ್ರಸ್ತುತ ವಿವಾಹದ ಕನಿಷ್ಠ ವಯಸ್ಸನ್ನು 18 ವರ್ಷಕ್ಕೆ ನಿಗದಿಗೊಳಿಸಲಾಗಿದೆ.

‘ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯಸ್ಸು ಎಷ್ಟಾಗಿರಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸುತ್ತಿದ್ದು, ಇದಕ್ಕಾಗಿ ಸಮಿತಿ ರಚಿಸಲಾಗಿದೆ. ಸಮಿತಿಯು ವರದಿ ನೀಡಿದ ಬಳಿಕ ಮದುವೆಯ ವಯಸ್ಸನ್ನು ಪರಿಷ್ಕರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೋದ ವರ್ಷದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಹೇಳಿದ್ದರು.

ಇದಕ್ಕಾಗಿ ಜಯಾ ಜೇಟ್ಲಿ ಅವರ ನೇತೃತ್ವದಲ್ಲಿ 10 ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು