ಬುಧವಾರ, ಜೂನ್ 29, 2022
24 °C

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಮಾರಾಟ ಆರೋಪ: ತನಿಖೆಗೆ ಪಂಜಾಬ್ ಸರ್ಕಾರದ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಢ: ಪಂಜಾಬ್‌ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಲಸಿಕೆಗಳನ್ನು ಮಾರಾಟ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಮಾಡಿರುವ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಶುಕ್ರವಾರ ಹೇಳಿದ್ದಾರೆ.

ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಿಧು ‘ನಾವು ಈಗಾಗಲೇ ಈ ಬಗ್ಗೆ ಸರಿಯಾದ ತನಿಖೆ ನಡೆಸುವಂತೆ ಆದೇಶಿಸಿದ್ದೇವೆ. ಈ ವಿಷಯವನ್ನು ಮುಖ್ಯಮಂತ್ರಿ ಬಳಿಯೂ ಇಡಲಿದ್ದೇವೆ’ ಎಂದು ಹೇಳಿದರು.

‘ಲಸಿಕೆ ಕಾರ್ಯಕ್ರಮವು ನನ್ನ ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ. ಇದು ಮುಖ್ಯ ಕಾರ್ಯದರ್ಶಿ ಮತ್ತು ಲಸಿಕೆ ಅಭಿಯಾನದ ನೋಡಲ್ ಅಧಿಕಾರಿ ವಿಕಾಸ್ ಗರ್ಗ್ ಅವರ ನಿಯಂತ್ರಣದಲ್ಲಿದೆ. ತಮ್ಮ ಇಲಾಖೆಯು ಲಸಿಕೆಗಳನ್ನು ಪರೀಕ್ಷಿಸುವುದು, ಚಿಕಿತ್ಸೆ ನೀಡುವುದು ಮತ್ತು ನಿರ್ವಹಿಸುವ ಕೆಲಸ ಮಾಡುತ್ತದೆ’ ಎಂದು ಸಿಧು ಪ್ರಾರಂಭದಲ್ಲಿ ಹೇಳಿದರು.

‘ನಮ್ಮ ಇಲಾಖೆಗೆ ಪೂರೈಕೆಯಾಗುವ ಲಸಿಕೆಗಳನ್ನು ನಮ್ಮ ಆಸ್ಪತ್ರೆಗಳಲ್ಲಿ ಮತ್ತು ಇಲಾಖೆ ನಡೆಸುವ ಆರೋಗ್ಯ ಶಿಬಿರಗಳಲ್ಲಿ ನಾವು ಅವುಗಳನ್ನು ಉಚಿತವಾಗಿ ನೀಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಕೋವಿಡ್ ಲಸಿಕೆಗಳನ್ನು ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಪಂಜಾಬ್‌ನ ವಿರೋಧ ಪಕ್ಷವಾದ ಶಿರೋಮಣಿ ಅಕಾಲಿದಳ ಗುರುವಾರ ಆರೋಪಿಸಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು