ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ರಂಗಕ್ಕೆ ಸಂಬಂಧಿಸಿದ ಎರಡು ಮಸೂದೆಗೆ ಲೋಕಸಭೆ ಅಸ್ತು

Last Updated 14 ಸೆಪ್ಟೆಂಬರ್ 2020, 11:23 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಹೋಮಿಯೊಪಥಿ ಆಯೋಗ ಮಸೂದೆ ಮತ್ತು ಭಾರತೀಯ ವೈದ್ಯ ಪದ್ಧತಿಯ ರಾಷ್ಟ್ರೀಯ ಆಯೋಗ ಮಸೂದೆಗಳಿಗೆ ಲೋಕಸಭೆ ಸೋಮವಾರ ಅನುಮೋದನೆ ನೀಡಿತು.

ದೇಶದಲ್ಲಿ ಗುಣಮಟ್ಟ ಮತ್ತು ಕೈಗೆಟುಕುವ ದರದಲ್ಲಿ ವೈದ್ಯಕೀಯ ಶಿಕ್ಷಣ ಕಲ್ಪಿಸಲು ಮತ್ತು ಹೋಮಿಯೊಪಥಿ, ಭಾರತೀಯ ವೈದ್ಯಪದ್ಧತಿಯಲ್ಲಿ ಪರಿಣತ ವೃತ್ತಿಪರರ ರೂಪಿಸುವ ಕ್ರಮಗಳಿಗೆ ಮಸೂದೆಗಳು ಒತ್ತು ನೀಡಲಿವೆ. ಇವುಗಳಿಗೆ ರಾಜ್ಯಸಭೆ ಈಗಾಗಲೇ ಅನುಮೋದನೆ ನೀಡಿದೆ.

ಇದಕ್ಕೂ ಮುನ್ನ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲಸದಸ್ಯರು, ಕೇಂದ್ರ ಈ ವಿಷಯದಲ್ಲಿ ವಿಸ್ತೃತ ಚರ್ಚೆ ನಡೆಸಬೇಕು ಎಂದು ಸಲಹೆ ಮಾಡಿದರು. ಮಸೂದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ಮಸೂದೆಗಳು ಹೋಮಿಯೊಪಥಿ ಮತ್ತು ಭಾರತೀಯ ವೈದ್ಯ ಪದ್ಧತಿ ಔಷಧಗಳಿಗೆ ಅನ್ವಯಿಸಿ ಉತ್ತಮ ಆಡಳಿತಕ್ಕೆ ನೆರವಾಗಲಿವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT