ಭಾನುವಾರ, ಮೇ 9, 2021
27 °C

ಸಚಿವ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆಗೆ ಆಗ್ರಹಿಸಿ ಪರಮ್ ಬೀರ್ ಸುಪ್ರೀಂ ಮೊರೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಭ್ರಷ್ಟಾಚಾರ ಆರೋಪದ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಅಲ್ಲದೆ ತಮ್ಮನ್ನು ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದಿಂದ ತಮ್ಮ ವಿರುದ್ಧ ಮತ್ತಷ್ಟು ಬಲವಂತದ ಕ್ರಮಗಳಿಂದ ರಕ್ಷಣೆಯನ್ನು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

 

 

ಇತ್ತೀಚೆಗಷ್ಟೇ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು. ಇದು ಮಹಾರಾಷ್ಟ್ರ ಅಷ್ಟೇ ಅಲ್ಲದೆ ದೇಶದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: 

ಏತನ್ಮಧ್ಯೆ ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ಮಾಜಿ ಪೊಲೀಸ್ ಆಯಕ್ತ ಪರಮ್ ಬೀರ್ ಸಿಂಗ್ ಸೋಮವಾರದಂದು ಅಧಿಕಾರ ವಹಿಸಿಕೊಂಡಿರುವುದಾಗಿ ವರದಿಯಾಗಿದೆ.

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದ ಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು