ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರೇಶಾನಿ ಪೇ ಚರ್ಚಾ’ ಯಾವಾಗ: ಪ್ರಧಾನಿ ಮೋದಿಗೆ ಎನ್‌ಸಿಪಿ ಪ್ರಶ್ನೆ

Last Updated 1 ಏಪ್ರಿಲ್ 2022, 7:37 IST
ಅಕ್ಷರ ಗಾತ್ರ

ಮುಂಬೈ: ಸಾಮಾನ್ಯ ಜನರ ಸಂಕಷ್ಟಗಳನ್ನು ಪರಿಹರಿಸಲು ‘ಪರೇಶಾನಿ ಪೇ ಚರ್ಚಾ’ ಕಾರ್ಯಕ್ರಮವನ್ನು ಯಾವಾಗ ಆಯೋಜಿಸುತ್ತೀರಿ ಎಂದು ಪ್ರಧಾನಿ ಮೋದಿಗೆ ಎನ್‌ಸಿಪಿ ಪ್ರಶ್ನಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, 'ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಒತ್ತಡವನ್ನು ದೂರಮಾಡಲು ಅವರೊಂದಿಗೆ ಸಂವಾದನಡೆಸಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳುತ್ತೇವೆ. ಆದರೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಸಾಮಾನ್ಯ ಜನರ ಸಂಕಷ್ಟಗಳನ್ನು ಪರಿಹರಿಸಲು ‘ಪರೇಶಾನಿ ಪೇ ಚರ್ಚಾ’ ಕಾರ್ಯಕ್ರಮವನ್ನು ಯಾವಾಗ ನಡೆಸುತ್ತೀರಿ’ ಎಂದು ಕ್ರಾಸ್ಟೊ ಪ್ರಶ್ನಿಸಿದ್ದಾರೆ.

‘ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆತಂಕ ಪಡುವ ಹಂತಕ್ಕೆ ನಿರುದ್ಯೋಗ ಬಂದು ತಲುಪಿದೆ. ಕೆಲ ಸೆಲೆಬ್ರಿಟಿಗಳು ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮವನ್ನು ನೋಡುವಂತೆ ಸಲಹೆ ನೀಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಅವರು ಎಂದಾದರೂ ಯೋಚಿಸಿದ್ದಾರಾ’ ಎಂದು ಕ್ರಾಸ್ಟೊ ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT