ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್‌ ಬೆದರಿಕೆ: ಐಫೆಲ್‌ ಟವರ್‌ಗೆ ಭದ್ರತೆ

Last Updated 23 ಸೆಪ್ಟೆಂಬರ್ 2020, 16:43 IST
ಅಕ್ಷರ ಗಾತ್ರ

ಪ್ಯಾರಿಸ್‌: ಪ್ರವಾಸಿಗರ ಆಕರ್ಷಣೆಯ ಕೇಂದ್ರ, ಐಫೆಲ್‌ ಟವರ್‌ ಅನ್ನು ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದ ಕಾರಣ,ಕಬ್ಬಿಣದ ಈ ಬೃಹತ್ ರಚನೆಗೆ ಬುಧವಾರ ಭಾರಿ‍ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

‘ಬಾಂಬ್‌ ಸ್ಫೋಟಿಸುವ ಬಗ್ಗೆ ಫೋನ್‌ ಮೂಲಕ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಅಸೋಸಿಯೇಟೆಡ್‌ ಪ್ರೆಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಐಫೆಲ್‌ ಟವರ್‌ ನಿರ್ವಹಣಾ ಕಚೇರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದೂ ಸಂಸ್ಥೆ ತಿಳಿಸಿದೆ.

131 ವರ್ಷ ಇತಿಹಾಸ ಹೊಂದಿರುವ ಗೋಪುರವನ್ನು ನೋಡಲು ಸಾಮಾನ್ಯದಿನಗಳಲ್ಲಿ ನಿತ್ಯವೂ 25,000ಕ್ಕೂ ಅಧಿಕ ಪ್ರವಾಸಿಗರು ಬರುತ್ತಾರೆ. ಕೋವಿಡ್‌ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿರುವ ಕಾರಣ ಈ ಬಾರಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ.

ಪ್ರವಾಸಿಗರ ವೀಕ್ಷಣೆಗಾಗಿ ನಿತ್ಯವೂ ಐಫೆಲ್‌ ಟವರ್‌ ಮುಕ್ತವಾಗಿರುತ್ತದೆ. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವ, ಬಾಂಬ್‌ ಸ್ಫೋಟಿಸುವ ಬೆದರಿಕೆ ಇಲ್ಲವೇ ನಿರ್ವಹಣೆಗೆ ನಿಯೋಜಿತ ಕಾರ್ಮಿಕರ ಮುಷ್ಕರದಿಂದಾಗಿ ಆಗಾಗ ಈ ಪ್ರವಾಸಿ ತಾಣಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT