ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತಾಂಶ ಭದ್ರತೆ–ಗೋಪ್ಯತೆ: ಐಆರ್‌ಸಿಟಿಸಿ ಅಧಿಕಾರಿಗಳ ಪ್ರಶ್ನಿಸುವ ಸಂಸದೀಯ ಸಮಿತಿ

Last Updated 24 ಆಗಸ್ಟ್ 2022, 14:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಕಾಂಗ್ರೆಸ್‌ ಸಂಸದ ಶಶಿತರೂರ್‌ ನೇತೃತ್ವದ ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಹಾಗೂ ಟ್ವಿಟರ್‌ ಇಂಡಿಯಾದ ಹಿರಿಯ ಅಧಿಕಾರಿಗಳಿಗೆ ಬುಧವಾರ ನೋಟಿಸ್‌ ನೀಡಿದೆ.

ಸಮಿತಿಯು ನಾಗರಿಕರ ದತ್ತಾಂಶ ಭದ್ರತೆ ಹಾಗೂ ಗೋಪ್ಯತೆ ವಿಚಾರವಾಗಿ ಚರ್ಚಿಸಲು ಶುಕ್ರವಾರ ಸಭೆ ಕರೆದಿದ್ದು, ಈ ವೇಳೆ ಉಭಯ ಸಂಸ್ಥೆಗಳ ಅಧಿಕಾರಿಗಳನ್ನು ಪ್ರಶ್ನಿಸುವ ಸಾಧ್ಯತೆ ಇದೆ.

‘ಐಆರ್‌ಸಿಟಿಸಿಯು 10 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿದೆ. ಈ ಪೈಕಿ 7.5 ಕೋಟಿ ಸಕ್ರಿಯ ಬಳಕೆದಾರರಿದ್ದಾರೆ. ₹1 ಸಾವಿರ ಕೋಟಿ ಆದಾಯ ಸಂಗ್ರಹಣೆ ಗುರಿ ಹೊಂದಿರುವ ಸಂಸ್ಥೆಯು ಪ್ರಯಾಣಿಕರು ಹಾಗೂ ಸರಕು ಸಾಗಾಣೆಗೆ ಸಂಬಂಧಿಸಿದ ದತ್ತಾಂಶಗಳನ್ನು ನಿರ್ವಹಣೆ ಮಾಡುವುದಕ್ಕಾಗಿ ಸಲಹೆಗಾರರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಟೆಂಡರ್‌ ಕೂಡ ಆಹ್ವಾನಿಸಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಸಂಸದೀಯ ಸಮಿತಿ ತೀರ್ಮಾನಿಸಿದೆ’ ಎಂದು ಮೂಲಗಳು ತಿಳಿಸಿವೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT