ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಸ್ತು

ನವದೆಹಲಿ: ದ್ವಿದಳಧಾನ್ಯಗಳು, ಎಣ್ಣೆಕಾಳು, ಖಾದ್ಯತೈಲ, ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಗಿಡುವ ‘ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆ’ಗೆ ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆಯಿತು.
ಸೆ.15ರಂದು ಲೋಕಸಭೆಯಲ್ಲಿ ಅನುಮೋದನೆ ಪಡೆದಿದ್ದ ಈ ಮಸೂದೆಗೆ ರಾಜ್ಯಸಭೆಯಲ್ಲಿ ಮಂಗಳವಾರ ಧ್ವನಿಮತದ ಅಂಗೀಕಾರ ದೊರೆಯಿತು.
ತಮ್ಮ ವ್ಯವಹಾರಗಳಲ್ಲಿ ಅತಿಯಾದ ನಿಯಂತ್ರಣ ಮತ್ತು ಹಸ್ತಕ್ಷೇಪವಾಗುತ್ತದೆ ಎಂಬ ಖಾಸಗಿ ಹೂಡಿಕೆದಾರರಲ್ಲಿನ ಭಯವನ್ನು ಈ ಮಸೂದೆ ತೊಡೆದು ಹಾಕುವ ಉದ್ದೇಶವನ್ನು ಹೊಂದಿದೆ.
ಉತ್ಪಾದನೆ, ಸಂಗ್ರಹಣೆ, ಸಾಗಣೆ, ಹಂಚಿಕೆ ಮತ್ತು ವಿತರಣೆಯ ಸ್ವಾತಂತ್ರ್ಯವು ಆರ್ಥಿಕತೆಯನ್ನು ಉತ್ತೇಜಿಸುವ ಜತೆಗೆ, ಕೃಷಿ ಕ್ಷೇತ್ರದಲ್ಲಿ ಖಾಸಗಿ ಅಥವಾ ವಿದೇಶಿ ನೇರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವುದಾಗಿ ಈ ಮೊದಲು ಸರ್ಕಾರ ಹೇಳಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.