ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐ ವ್ಯಾಪ್ತಿಗೆ ಸಹಕಾರ ಸಂಘಗಳು: ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ

'ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020' ಮಸೂದೆ ಅಂಗೀಕಾರ
Last Updated 22 ಸೆಪ್ಟೆಂಬರ್ 2020, 9:39 IST
ಅಕ್ಷರ ಗಾತ್ರ

ನವದೆಹಲಿ: ಠೇವಣಿದಾರರ ಹಿತವನ್ನು ರಕ್ಷಿಸುವ ಕ್ರಮವಾಗಿ ಸಹಕಾರ ಬ್ಯಾಂಕ್ ಗಳನ್ನೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮೇಲ್ವಿಚಾರಣಾ ವ್ಯಾಪ್ತಿಗೆ ತರುವ ಮಸೂದೆಗೆ ಸಂಸತ್ತು ಮಂಗಳವಾರ ಅಂಗೀಕಾರ ನೀಡಿದೆ.

ಜೂನ್ 26ರಂದು ಹೊರಡಿಸಲಾದ ಸುಗ್ರೀವಾಜ್ಞೆ ರೂಪದಲ್ಲಿ ಈ ‘ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020’ ಈಗಾಗಲೇ ಜಾರಿಯಲ್ಲಿದೆ. ರಾಜ್ಯಸಭೆಯು ಧ್ವನಿಮತದಿಂದ ಮಸೂದೆಗೆ ಅನುಮೋದನೆ ನೀಡಿತು. ಲೋಕಸಭೆಯು ಸೆ. 16ರಂದು ಇದಕ್ಕೆ ಅಂಗೀಕಾರ ನೀಡಿತ್ತು.

ಸಹಕಾರ ಸಂಘಗಳ ವೃತ್ತಿಪರತೆಯನ್ನು ಬಲಪಡಿಸುವುದು, ಬಂಡವಾಳ ಕ್ರೋಡೀಕರಣಕ್ಕೆ ಅವಕಾಶ, ಆಡಳಿತ ವ್ಯವಸ್ಥೆ ಸುಧಾರಣೆ, ಆರ್.ಬಿ.ಐ ಮೇಲ್ವಿಚಾರಣೆಯ ವ್ಯಾಪ್ತಿಗೆ ತರುವುದು ಇದರ ಉದ್ದೇಶಗಳಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಠೇವಣಿದಾರರ ಹಿತವನ್ನು ಸಂಪೂರ್ಣವಾಗಿ ರಕ್ಷಿಸುವುದು ಈ ಮಸೂದೆಯ ಉದ್ದೇಶ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT