ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಳೆಯುಳಿಕೆಯೇತರ ಇಂಧನ ಬಳಕೆ: ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

Last Updated 12 ಡಿಸೆಂಬರ್ 2022, 15:41 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಪಳೆಯುಳಿಕೆಯೇತರ ಇಂಧನ ಮೂಲಗಳಾದ ಬಯೋಮಾಸ್‌, ಇಥೆನಾಲ್‌ ಮತ್ತು ಹಸಿರು ಹೈಡ್ರೋಜನ್‌ ಬಳಕೆಯನ್ನು ಕಡ್ಡಾಯಗೊಳಿಸುವ ಇಂಧನ ಸಂರಕ್ಷಣಾ ಮಸೂದೆ (ತಿದ್ದುಪಡಿ)–2022ಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ.

ಈ ವರ್ಷದ ಆಗಸ್ಟ್‌ನಲ್ಲಿ ನಡೆದಿದ್ದ ಲೋಕಸಭಾ ಅಧಿವೇಶನದಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತಿತ್ತು. ರಾಜ್ಯಸಭೆಯಲ್ಲಿ ಸೋಮವಾರ ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಇಂಧನ ಬಳಕೆಯ ಮಾನದಂಡಗಳನ್ನು ಅನುಸರಿಸಲು ವಿಫಲವಾಗುವ ಕೈಗಾರಿಕಾ ಘಟಕಗಳು ಅಥವಾ ಹಡಗುಗಳು ಮತ್ತು ವಾಹನ ಉತ್ಪಾದನಾ ಕಂಪನಿಗಳಿಗೆ ದಂಡ ವಿಧಿಸುವ ಅವಕಾಶವನ್ನು ಈ ಮಸೂದೆ ಕಲ್ಪಿಸಲಿದೆ.

ನವೀಕರಿಸಬಹುದಾದ ಇಂಧನಗಳ ಬಳಕೆ ಉತ್ತೇಜಿಸುವ ಹಾಗೂ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ತನ್ನ ಅಂತರರಾಷ್ಟ್ರೀಯ ಬದ್ಧತೆ ಸಾಧಿಸಲು ದೇಶಕ್ಕೆ ಈ ಮಸೂದೆ ಸಹಕಾರಿಯಾಗಿದೆ.ಪ್ಯಾರಿಸ್‌ ಒಪ್ಪಂದಕ್ಕೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲೂ ಇದು ಭಾರತಕ್ಕೆ ನೆರವಾಗಲಿದೆ.

ಮಸೂದೆ ಮೇಲಿನ ಚರ್ಚೆಯ ವೇಳೆ ಮಾತನಾಡಿದನವೀಕರಿಸಬಹುದಾದ ಇಂಧನ ಸಚಿವ ಆರ್‌.ಕೆ.ಸಿಂಗ್‌, ‘ಈ ಮಸೂದೆಯು ಪರಿಸರ ಸ್ನೇಹಿಯಾಗಿದ್ದು, ದೇಶದಲ್ಲಿ ಕಾರ್ಬನ್‌ ಟ್ರೇಡಿಂಗ್‌ಗೆ ಅನುವು ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT