ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚು ಅಧಿಕಾರ: ದೆಹಲಿ ಮಸೂದೆ ಅಂಗೀಕಾರ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ರಾಷ್ಟ್ರ ರಾಜಧಾನಿ ತಿದ್ದುಪಡಿ ಮಸೂದೆಯನ್ನು(ಎನ್‌ಸಿಟಿ) ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ.

ದೆಹಲಿಯ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ಗೆ ಈ ಮಸೂದೆ ಹೆಚ್ಚಿನ ಅಧಿಕಾರವನ್ನು ನೀಡಲಿದೆ.

ವಿವಾದಿತ ಮಸೂದೆಯು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್, ಬಿಜೆಡಿ, ಎಸ್‌ಪಿ ಮತ್ತು ವೈಎಸ್‌ಆರ್‌ ಪಕ್ಷಗಳ ಸಂಸದರು ಸದನದಿಂದ ಹೊರನಡೆದಿದ್ದಾರೆ.

ಮಸೂದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಇದನ್ನು 'ಪ್ರಜಾಪ್ರಭುತ್ವದ ಕರಾಳ ದಿನ'ವೆಂದು ಕಿಡಿ ಕಾರಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ಜಿಎನ್‌ಸಿಟಿಡಿ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಕರಾಳ ದಿನ. ಜನರಿಗೆ ಮರಳಿ ಅಧಿಕಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ನಾವು ಹೋರಾಡುತ್ತೇವೆ. ಏನೇ ಅಡೆತಡೆಗಳು ಇದ್ದರೂ ನಾವು ಉತ್ತಮ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ನಮ್ಮ ಕೆಲಸ ನಿಲ್ಲುವುದಿಲ್ಲ ಅಥವಾ ನಿಧಾನವಾಗುವುದಿಲ್ಲ' ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು