ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ: ಬೆಲೆ ಏರಿಕೆ, ನಿರುದ್ಯೋಗ,ಮೀಸಲಾತಿ ಚರ್ಚೆ

Last Updated 7 ಡಿಸೆಂಬರ್ 2022, 2:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬುಧವಾರ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ಮತ್ತು ಭಾರತ–ಚೀನಾ ಗಡಿ ಸಂಘರ್ಷ ಕುರಿತು ಚರ್ಚೆ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಈ ಅಧಿವೇಶನದಲ್ಲಿ ಈ ವಿಚಾರಗಳನ್ನು ಚರ್ಚೆಗೆ ಎತ್ತಿಕೊಳ್ಳಬೇಕು ಎಂದು ವಿರೋಧ ಪಕ್ಷಗಳು ಮಂಗಳವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿವೆ.

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ಮತ್ತು ಭಾರತ–ಚೀನಾ ಗಡಿ ಸಂಘರ್ಷ ಕುರಿತು ಬುಧವಾರ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಈ ಅಧಿವೇಶನದಲ್ಲಿ ಈ ವಿಚಾರಗಳನ್ನು ಚರ್ಚೆಗೆ ಎತ್ತಿಕೊಳ್ಳಬೇಕು ಎಂದು ವಿರೋಧ ಪಕ್ಷಗಳು ಮಂಗಳವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿವೆ.

ಸಂಸತ್ತಿನ ನೀತಿ–ನಿಯಮಗಳಿಗನುಸಾರವಾಗಿ ಈ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಎಲ್ಲಾ ಪಕ್ಷಗಳು ಸಹಕಾರ ನೀಡಬೇಕು ಎಂದು ಸರ್ಕಾರವು ಸರ್ವಪಕ್ಷಗಳ ಸಭೆಯಲ್ಲಿ ಕೋರಿದೆ. 30ಕ್ಕೂ ಹೆಚ್ಚು ಪಕ್ಷಗಳು ಈ ಸಭೆಯಲ್ಲಿ ಭಾಗಿಯಾಗಿದ್ದವು.

ಮಹಿಳಾ ಮೀಸಲಾತಿ ಮಸೂದೆಯನ್ನು ಈ ಅಧಿವೇಶನದಲ್ಲಿ ಅಂಗೀಕರಿಸಬೇಕು ಎಂದು ಬಿಜೆಡಿ ಹೇಳಿದೆ. ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ಅಂಗೀಕರಿಸಬೇಕು ಎಂದು ಶಿವಸೇನಾ (ಏಕನಾಥ ಶಿಂದೆ ಬಣ) ಒತ್ತಾಯಿಸಿದೆ.

ಸಭೆಯಲ್ಲಿ ಭಾಗಿಯಾಗಿದ್ದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ಅಧಿವೇಶನದಲ್ಲಿ ಮಂಡಿಸಲು ಸಿದ್ಧಮಾಡಿಕೊಂಡಿರುವ ಮಸೂದೆಗಳ ಪಟ್ಟಿಯನ್ನು ಸಭೆಯ ಮುಂದಿಟ್ಟರು. ಆಗ, ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಅಧಿರ್ ರಂಜನ್ ಚೌಧರಿ ಅವರು, ಬೆಲೆ ಏರಿಕೆ, ನಿರುದ್ಯೋಗ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆಯ ವಿಚಾರಗಳನ್ನು ಚರ್ಚೆಗೆ ಎತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜತೆಗೆ, ಭಾರತ–ಚೀನಾ ಗಡಿ ಸಂಘರ್ಷದ ಬಗ್ಗೆ ಸರ್ಕಾರವು ನಿಖರವಾದ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಈ ವಿಚಾರದ ಬಗ್ಗೆ ಸದನದಲ್ಲಿ ವಿಸ್ತೃವಾದ ಚರ್ಚೆ ನಡೆಯಬೇಕು. ಕಾಶ್ಮೀರಿ ಪಂಡಿತರ ಹತ್ಯೆ ಕುರಿತೂ ಚರ್ಚೆ ನಡೆಯಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT