ಮಂಗಳವಾರ, ಜನವರಿ 18, 2022
23 °C

ರಾಜ್ಯಸಭಾ ಸದಸ್ಯರ ಅಮಾನತು: ಸದನದಲ್ಲಿ ಮುಂದುವರಿದ ಗದ್ದಲ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷಗಳ 12 ಸದಸ್ಯರ ಅಮಾನತನ್ನು ಖಂಡಿಸಿ ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಗುರುವಾರವೂ ಪ್ರತಿಭಟನೆ ನಡೆಸಿವೆ.

ಇದೇ ವೇಳೆ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸರ್ಕಾರವು ಒತ್ತಾಯಿಸಿದೆ. 

‘12 ಸದಸ್ಯರ ಅಮಾನತಿಗೆ ಸಂಬಂಧಿಸಿದ ವಿಚಾರದಲ್ಲಿ ಪ್ರತಿಪಕ್ಷಗಳ ನಾಯಕರು ಸದನದ ಘನತೆಯನ್ನು ಕುಗ್ಗಿಸಿರುವುದು ವಿಷಾದನೀಯ‘ ಎಂದು ರಾಜ್ಯಸಭೆಯ ಸಭಾನಾಯಕ ಪಿಯೂಷ್ ಗೋಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಾನತುಗೊಂಡಿರುವ ಸದಸ್ಯರು ಸದನದ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 

ಇದೇ ವಿಚಾರವಾಗಿ ಪ್ರತಿಪಕ್ಷಗಳು ಮೇಲ್ಮನೆಯಲ್ಲಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು