ಮಂಗಳವಾರ, ಜನವರಿ 25, 2022
25 °C

ಕ್ಷಮೆಯಾಚಿಸಿದರೆ 12 ಸಂಸದರ ಅಮಾನತು ವಾಪಸ್: ಸಚಿವ ಪ್ರಲ್ಹಾದ ಜೋಶಿ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕ್ಷಮೆಯಾಚಿಸಿದರೆ 12 ಮಂದಿ ರಾಜ್ಯಸಭಾ ಸಂಸದರ ಅಮಾನತನ್ನು ವಾಪಸ್ ಪಡೆಯಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸಂಸದರ ಅಮಾನತು ನಿರ್ಧಾರ ವಾಪಸ್ ಪಡೆಯುವಂತೆ ಪ್ರತಿಪಕ್ಷಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಓದಿ: ಸಂಸದರ ಅಮಾನತು ವಾಪಸ್‌ಗೆ ಆಗ್ರಹಿಸಿ ಪ್ರತಿಭಟನೆ: ಸಂಸತ್ತಿನ ಒಳಗೂ ಹೊರಗೂ ಧರಣಿ

‘ಸಂಸದರನ್ನು ಯಾಕೆ ಅಮಾನತು ಮಾಡಲಾಗಿದೆ ಎಂಬುದನ್ನು ನಾವು ವಿವರಿಸಿದ್ದೇವೆ. ಏನು ನಡೆದಿತ್ತು ಎಂಬುದಕ್ಕೆ ದೇಶವೇ ಸಾಕ್ಷಿಯಾಗಿದೆ. ಅದು ದಾಖಲೆಗಳಲ್ಲಿಯೂ ಇದೆ. ಇವತ್ತಾದರೂ ಸರಿ, ಅವರು ಕ್ಷಮೆ ಯಾಚಿಸಿದರೆ ಅಮಾನತು ನಿರ್ಧಾರ ವಾಪಸ್ ಪಡೆಯಲು ಸಿದ್ಧರಿದ್ದೇವೆ’ ಎಂದು ಜೋಶಿ ಹೇಳಿದ್ದಾರೆ.

ಈ ಮಧ್ಯೆ, ಸಂಸದರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಮಂಗಳವಾರವೂ ಸಂಸತ್‌ನಲ್ಲಿ ಧರಣಿ ನಡೆಸಿವೆ. ಈ ವಿಚಾರವಾಗಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಮಧ್ಯಾಹ್ನ 1 ಗಂಟೆಗೆ ಪ್ರತಿಪಕ್ಷಗಳ ನಾಯಕರು ಸಭೆ ಸೇರಲಿದ್ದಾರೆ.

ಅಮಾನತುಗೊಂಡ 12 ಮಂದಿ ರಾಜ್ಯಸಭಾ ಸಂಸದರಲ್ಲಿ ಕಾಂಗ್ರೆಸ್‌ನ ಆರು, ತೃಣಮೂಲ ಕಾಂಗ್ರೆಸ್ ಮತ್ತು ಶಿವಸೇನಾದ ತಲಾ ಇಬ್ಬರು, ಸಿಪಿಐ ಮತ್ತು ಸಿಪಿಎಂನ ತಲಾ ಒಬ್ಬರು ಇದ್ದಾರೆ.

ಓದಿ: ಸಂಸದರ ಅಮಾನತು ಹಿಂಪಡೆಯುವವರೆಗೆ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಶಶಿ ತರೂರ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು