ಸೋಮವಾರ, ಸೆಪ್ಟೆಂಬರ್ 28, 2020
20 °C

ಮುಂಬೈ ಕಟ್ಟಡ ಕುಸಿತ: ಅವಶೇಷಗಳಡಿ ಮಹಿಳೆ ಸಿಲುಕಿರುವ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಇಲ್ಲಿನ ಡೊಂಗ್ರಿ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎಂಟು ಅಂತಸ್ತಿನ ಕಟ್ಟಡದ ಹಿಂಭಾಗ ಕುಸಿದಿದ್ದು, ಕಟ್ಟಡದ ಅವಶೇಷಗಳಡಿ ಮಹಿಳೆಯೊಬ್ಬರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

ಬೆಳಿಗ್ಗೆ 7.30ರ ಸುಮಾರಿಗೆ ಡೊಂಗ್ರಿ ಪ್ರದೇಶದ ಸರ್ದಾರ್ ವಲ್ಲಭಭಾಯಿ ಪಟೇಲ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಳೆಯ ಕಟ್ಟಡದ ಮೂರನೇ ಮತ್ತು ಏಳನೇ ಮಹಡಿಗಳ ನಡುವಿನ ಸಂಪೂರ್ಣ ಹಿಂಭಾಗ ಕುಸಿದಿದೆ ಎಂದು ಅವರು ಮಾಹಿತಿ ನೀಡಿದರು.

‌ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬುಲೆನ್ಸ್‌ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು