ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ 14 ದಿನ ನ್ಯಾಯಾಂಗ ಬಂಧನಕ್ಕೆ

Last Updated 5 ಆಗಸ್ಟ್ 2022, 14:42 IST
ಅಕ್ಷರ ಗಾತ್ರ

ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಸ್ಥಾಪನೆಯಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೋನ್ ಕುಮಾರ್ ಸಾಧು ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಮನವಿಯ ಮೇರೆಗೆ ಪಾರ್ಥ ಮತ್ತು ಅರ್ಪಿತಾ ಅವರನ್ನು ಆಗಸ್ಟ್‌ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ವಿಶೇಷ ನ್ಯಾಯಾಲಯವು ಪಾರ್ಥ ಚಟರ್ಜಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣಾ ದಿನಾಂಕವಾದ ಇದೇ 18ರಂದು ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಅವರನ್ನು ಹಾಜರುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿತು.

ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅರ್ಪಿತಾ ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT