ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಆರೋಗ್ಯ ದಿಢೀರ್ ಹದಗೆಟ್ಟಿದೆ.

ಪ್ರೆಸಿಡೆನ್ಸಿ ಜೈಲಿನಲ್ಲಿದ್ದ ಅವರನ್ನು ಆರೋಗ್ಯ ತಪಾಸಣೆಗಾಗಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಪಾರ್ಥ ಚಟರ್ಜಿ ಆಪ್ತ ಸಹಾಯಕನ ಪತ್ತೆಗೆ ಶೋಧ: ಜಾರ್ಖಂಡ್ ಹೋಟೆಲ್ ಮೇಲೆ ಐಟಿ ದಾಳಿ

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿಗೆ ಆಗಸ್ಟ್ 31ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಈ ಮಧ್ಯೆ, ಪಾರ್ಥ ಚಟರ್ಜಿ ಸಹಾಯಕನ ಪತ್ತೆಗೆ ಆದಾಯ ತೆರಿಗೆ ಇಲಾಖೆಯು ಶೋಧ ನಡೆಸುತ್ತಿದ್ದು, ಶುಕ್ರವಾರ ಜಾರ್ಖಂಡ್‌ನ ಹೋಟೆಲ್ ಒಂದರ ಮೇಲೆ ದಾಳಿ ನಡೆಸಿತ್ತು.

ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಜುಲೈ 23ರಂದು ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಅವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.