ಮಂಗಳವಾರ, ಜನವರಿ 25, 2022
24 °C

5 ರಾಜ್ಯಗಳ ಚುನಾವಣೆ: ಪಕ್ಷಗಳಿಂದ ₹1,100 ಕೋಟಿ ಸ್ವೀಕಾರ: ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ 2021ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು  ₹ 1,100 ಕೋಟಿ ಪಡೆದುಕೊಂಡಿದ್ದು, ₹ 500 ಕೋಟಿಗೂ ಅಧಿಕ ವೆಚ್ಚ ಮಾಡಿವೆ. ದೊಡ್ಡ ಮೊತ್ತವನ್ನು ಜಾಹೀರಾತು ಮತ್ತು ಸ್ಟಾರ್ ಪ್ರಚಾರಕರ ಪ್ರಯಾಣ ವೆಚ್ಚಕ್ಕಾಗಿ ವ್ಯಯಿಸಲಾಗಿದೆ ಎಂದು ಅಸೋಸಿಯೇಷನ್ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್ (ಎಡಿಆರ್‌) ಮತ್ತು ನ್ಯಾಷನಲ್ ಎಲೆಕ್ಷನ್‌ ವಾಚ್‌ ಸಂಸ್ಥೆಗಳು ಸಿದ್ಧಪಡಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಗರಿಷ್ಠ ಪ್ರಮಾಣದ ಅಂದರೆ ₹ 611.69 ಕೋಟಿ ಪಡೆದು, ₹ 252 ಕೋಟಿ ವ್ಯಯಿಸಿದ್ದರೆ, ಕಾಂಗ್ರೆಸ್ ₹ 193 ಕೋಟಿ ಪಡೆದು ₹ 85.62 ಕೋಟಿ ವ್ಯಯಿಸಿದೆ ಎಂದು ತಿಳಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು