ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ರಹಿತ ವಿರೋಧಪಕ್ಷಗಳ ಒಗ್ಗಟ್ಟು ಅಸಾಧ್ಯ: ಜೈರಾಂ ರಮೇಶ್

Last Updated 18 ಸೆಪ್ಟೆಂಬರ್ 2022, 15:15 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಹಳೆಯ ಪಕ್ಷ ಕಾಂಗ್ರೆಸ್ ಅನ್ನು ಹೊರತುಪಡಿಸಿ, ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಇರಬಹುದು ಎಂದು ನಂಬಿರುವ ಬಿಜೆಪಿಯೇತರ ಪಕ್ಷಗಳದು ಮೂರ್ಖತನದ ಪರಮಾವಧಿ ಎಂದೇ ಭಾವಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಂ ರಮೇಶ್ ಭಾನುವಾರ ಹೇಳಿದ್ದಾರೆ.

ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸದ ಅವರು, ‌ಹಲವು ಪ್ರಾದೇಶಿಕ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗಾಗಿ ಹಳೆಯ ಪಕ್ಷ ಕಾಂಗ್ರೆಸ್‌ನ ಬೆನ್ನಿಗೆ ಚೂರಿ ಹಾಕಿದ್ದು, ಅಂಥ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದರು.

ಕೋಲ್ಕತ್ತದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಅವರು, ‘ಕಾಂಗ್ರೆಸ್ ಅನ್ನು ಆಧಾರವಾಗಿಸಿಕೊಳ್ಳದೇ ಪ್ರತಿಪಕ್ಷಗಳ ಒಗ್ಗಟ್ಟು ಅಸಾಧ್ಯ. ಕಾಂಗ್ರೆಸ್ ಹೊರತುಪಡಿಸಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರತಿಪಾದಿಸುವವರು, ವಿರೋಧ ಹಾಗೂ ಹಳೆಯಪಕ್ಷವಾಗಿರುವ ಕಾಂಗ್ರೆಸ್‌ ಅನ್ನು ದುರ್ಬಲಗೊಳಿಸಲು ಬಯಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು.

‘ಬಿಜೆಪಿಯೇತರ ಒಕ್ಕೂಟವು ಯಾವುದೇ ಮೈತ್ರಿಕೂಟದಿಂದ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಬಹುದು ಎಂದು ನಂಬಿದರೆ, ಅವು ಮೂರ್ಖರ ಸ್ವರ್ಗದಲ್ಲಿವೆ ಎಂದರ್ಥ. ಕಾಂಗ್ರೆಸ್ ಅನ್ನು ಹೊರತುಪಡಿಸಿ ಯಾವುದೇ ವಿರೋಧಪಕ್ಷಗಳು ಒಗ್ಗಟ್ಟಿನಿಂದಿರಲು ಸಾಧ್ಯವಿಲ್ಲ’ ಎಂದರು.

ಆಮ್ ಆದ್ಮಿ ಪಕ್ಷವನ್ನು ಬಿಜೆಪಿಯ ‘ಬಿ–ಟೀಮ್’ ಎಂದು ಆರೋಪಿಸಿದ ಅವರು, ತೃಣಮೂಲ ಕಾಂಗ್ರೆಸ್‌ ಕೂಡಾ ಅರವಿಂದ ಕೇಜ್ರಿವಾಲ್ ನೇತೃತ್ವದ ಪಕ್ಷದಂತೆಯೇ ಕಾಂಗ್ರೆಸ್‌ ಪಕ್ಷಕ್ಕೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT