ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ 50 ಡಿಗ್ರಿಗಿಂತ ಅಧಿಕ ಉಷ್ಣಾಂಶ?

Last Updated 9 ಮಾರ್ಚ್ 2023, 16:51 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಈಗ ತಾಪಮಾನವು ಅಭೂತಪೂರ್ವ ಮಟ್ಟಕ್ಕೆ ಏರಿದ್ದು, ರಾಜ್ಯದ ದಕ್ಷಿಣ ತುದಿ, ಅಲಪ್ಪುಳ, ಕೊಟ್ಟಾಯಂ ಮತ್ತು ಕಣ್ಣೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ತಾಪಮಾನವು 54 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಗುರುವಾರ ತಿಳಿಸಿದೆ.

ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಕೊಯಿಕ್ಕೋಡ್‌ ಮತ್ತು ಕಣ್ಣೂರಿನ ಪ್ರಮುಖ ಪ್ರದೇಶಗಳಲ್ಲಿ ಗುರುವಾರ 45-54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ವರದಿ ಹೇಳಿದೆ.

ಉಷ್ಣಾಂಶ ಸೂಚ್ಯಂಕವನ್ನು ಆಧರಿಸಿ ಈ ವರದಿ ಸಿದ್ಧಪಡಿಸಲಾಗಿದ್ದು, ಕಾಸರಗೋಡು, ಕೋಯಿಕ್ಕೋಡ್‌, ಮಲಪ್ಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಎರ್ನಾಕುಲಂನಲ್ಲಿ 40-45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ ಎಂದು ತಿಳಿಸಲಾಗಿದೆ. ಇಡುಕ್ಕಿ ಮತ್ತು ವಯನಾಡ್‌ನ ಕೆಲವು ಗುಡ್ಡಗಾಡು ಜಿಲ್ಲೆಗಳು ಮಾತ್ರ 29 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಉಷ್ಣಾಂಶ ಹೊಂದಿವೆ ಎಂದು ವರದಿ ಹೇಳಿದೆ. ಜನರು ಹೊರಗೆ ಹೋಗುವಾಗ ಹೆಚ್ಚಿನ ಕಾಳಜಿ ವಹಿಸುವಂತೆ ಮತ್ತು ಬಿಸಿಲಿನ ತಾಪದಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

ಈ ವರದಿ ಬಗ್ಗೆ ಪ್ರತಿಕ್ರಿಯಿಸಲು ಐಎಂಡಿ ತಿರುವನಂತಪುರ ನಿರಾಕರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT