ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ಗೆ ಜೀವಬೆದರಿಕೆ ಪತ್ರ

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಜೀವಬೆದರಿಕೆ ಇರುವ ಕುರಿತು ಅನಾಮಧೇಯ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಅವರಿಗೆ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಿದೆ.
ಮುಖ್ಯಮಂತ್ರಿ ಅವರ ಹತ್ಯೆಗೆ ಸಂಚು ನಡೆದಿದೆ ಎಂದು ಶಂಕಿಸಿರುವ ಸರ್ಕಾರ, ಅನಾಮಧೇಯ ಪತ್ರ ಕುರಿತಂತೆ ತನಿಖೆಗೆ ಆದೇಶಿಸಿದೆ.
ಅನಾಮಧೇಯ ಪತ್ರ ಇಂಗ್ಲಿಷ್ನಲ್ಲಿದ್ದು, ‘ಆತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಗುತ್ತಿಗೆ ಹತ್ಯೆಗಾರರು ದಾಳಿ ನಡೆಸುವರು’ ಎಂದು ತಿಳಿಸಲಾಗಿದೆ.
‘ಗುತ್ತಿಗೆ ಕೊಲೆಗಾರರು ನಿಮ್ಮ ಮೇಲೆ ದಾಳಿ ನಡೆಸಲಿದ್ದಾರೆ ಎಂದು ತಿಳಿಸಲು ಬಯಸುತ್ತೇನೆ. ಇವರು ವೃತ್ತಿಪರ ಹತ್ಯೆಗಾರರು. ಅವರ ಬಳಿಕ ಎಕೆ–47, ಸೆಮಿ ಆಟೊಮ್ಯಾಟಿಕ್ ಪಿಸ್ತೂಲು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿವೆ. ಅವರು ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಬಹುದು, ಜಾಗೃತರಾಗಿರಿ’ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.
‘ಪಿತೂರಿಯ ಮಾಸ್ಟರ್ ಮೈಂಡ್ ನಾಗಪುರದಲ್ಲಿ ವಾಸಿಸುತ್ತಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.