ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಟ್ಟೆ ನೋವು: ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಶರದ್‌ ಪವಾರ್‌

Last Updated 29 ಮಾರ್ಚ್ 2021, 7:20 IST
ಅಕ್ಷರ ಗಾತ್ರ

ಮುಂಬೈ: ಪಿತ್ತಕೋಶದ ಸಮಸ್ಯೆ ಎದುರಿಸುತ್ತಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಇಲ್ಲಿನ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಸೋಮವಾರ ಇಲ್ಲಿ ಹೇಳಿದ್ದಾರೆ.

‘ನಮ್ಮ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರಿಗೆ ನಿನ್ನೆ ಸಂಜೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ತಪಾಸಣೆಗಾಗಿ ಇಲ್ಲಿನ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಪಾಸಣೆ ಬಳಿಕ, ಅವರ ಪಿತ್ತಕೋಶದಲ್ಲಿ ಸಮಸ್ಯೆ ಇದೆ ಎಂಬುದು ಗೊತ್ತಾಯಿತು’ ಎಂದು ಮಲಿಕ್‌ ಟ್ವೀಟ್‌ ಮಾಡಿದ್ದಾರೆ.

‘ಪವಾರ್‌ ಅವರು ಬ್ಲಡ್‌ ಥಿನ್ನಿಂಗ್‌ ಔಷಧಿ ತೆಗೆದುಕೊಳ್ಳುತ್ತಾರೆ. ಆದರೆ, ಪಿತ್ತಕೋಶದಸಮಸ್ಯೆಯ ಕಾರಣ ಸದ್ಯಕ್ಕೆ ಆ ಔಷಧಿಯನ್ನು ನಿಲ್ಲಿಸಲಾಗಿದೆ. ಅವರು ಇದೇ 31ರಂದು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಅಲ್ಲಿ ಎಂಡೊಸ್ಕೋಪಿ ಮತ್ತು ಶಸ್ತ್ರಚಿಕಿತ್ಸೆ ನಡೆಯಲಿದೆ. ಹಾಗಾಗಿ ಈ ಅವಧಿಯಲ್ಲಿ ನಿಗದಿಯಾಗಿದ್ದ ಅವರ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

80 ವರ್ಷದ ಪವಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಅಹಮದಾಬಾದ್‌ನ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ಭೇಟಿಯಾಗಿದ್ದರು ಎಂಬ ಊಹಾಪೋಹಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT