ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್: ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಲಿ ಎಂದು ‘ಸುಪ್ರೀಂ’ಗೆ ಅರ್ಜಿ

Last Updated 25 ಜುಲೈ 2021, 7:38 IST
ಅಕ್ಷರ ಗಾತ್ರ

ನವದೆಹಲಿ: ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿದ ವರದಿಗಳ ಬಗ್ಗೆ ಕೋರ್ಟ್‌ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಕೋರಿ ರಾಜ್ಯಸಭಾ ಸದಸ್ಯ ಜಾನ್‌ ಬ್ರಿಟಾಸ್‌ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ಪೆಗಾಸಸ್‌ ಕಣ್ಗಾವಲು ತಂತ್ರಾಂಶವನ್ನು ಬಳಸಿ ರಾಜಕೀಯ ನಾಯಕರು, ಸಚಿವರು, ಸರ್ಕಾರಿ ಸಿಬ್ಬಂದಿ ಸೇರಿದಂತೆ ಸುಮಾರು 300 ಭಾರತೀಯರ ಮೇಲೆ ನಿಗಾ ಇರಿಸಲಾಗಿದೆ’ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಜಾನ್‌ ಬ್ರಿಟಾಸ್‌ ಅವರು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

‘ಇದು ಭಾರತೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ಈ ರೀತಿಯ ನಡೆಯಿಂದ ಜನರ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಬಹುದು. ಹಾಗಾಗಿ ಈ ಬಗ್ಗೆ ಕೋರ್ಟ್‌ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು’ ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

‘ಈ ವಿಷಯ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಆದರೂ ಕೇಂದ್ರ ಸರ್ಕಾರವು ಈ ಬಗೆಗಿನ ತನಿಖೆ ಬಗ್ಗೆ ಕಾಳಜಿ ವಹಿಸಿಲ್ಲ. ಬದಲಿಗೆ ದೇಶದಲ್ಲಿ ಈ ರೀತಿಯ ಅನಧಿಕೃತ ಕಣ್ಗಾವಲು ಪ್ರಕ್ರಿಯೆಗಳು ನಡೆಯದಂತೆ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂಬುದಾಗಿ ಸರ್ಕಾರ ಹೇಳಿತು’ ಎಂದು ಜಾನ್‌ ಬ್ರಿಟಾಸ್‌ ಅವರು ಭಾನುವಾರ ತಿಳಿಸಿದರು.

‘ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಯಿತು. ಆದರೆ, ಈ ಆರೋಪಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿಯೂ ಇಲ್ಲ, ಒಪ್ಪಿಕೊಳ್ಳಲೂ ಇಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT