ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್ ಗೂಢಚರ್ಯೆ: ತನಿಖೆಗೆ ಕೋರಿ ಸಿಪಿಎಂ ರಾಜ್ಯಸಭಾ ಸದಸ್ಯ 'ಸುಪ್ರೀಂ'ಗೆ ಅರ್ಜಿ

Last Updated 25 ಜುಲೈ 2021, 20:43 IST
ಅಕ್ಷರ ಗಾತ್ರ

ನವದೆಹಲಿ: ಪೆಗಾಸಸ್ ಗೂಢಚರ್ಯೆ ಕುರಿತು ಸುಪ್ರೀಂ ಕೋರ್ಟ್‌ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಿಪಿಎಂ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘300 ಭಾರತೀಯರು ಗೂಢಚರ್ಯೆಯ ಗುರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಕಾರಣಿಗಳು, ಸಚಿವರು, ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಚುನಾವಣಾ ಆಯುಕ್ತರ ಮೇಲೆ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ. ಇದು ಜನರ ಖಾಸಗಿತನದ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ. ಹೀಗಾಗಿ ತನಿಖೆಗೆ ಆದೇಶಿಸಿ’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT