ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್ ಪ್ರಕರಣ: ಕೇಂದ್ರಕ್ಕೆ ಕಾಲಾವಕಾಶ, ಸೆ.13ಕ್ಕೆ ಮುಂದಿನ ವಿಚಾರಣೆ

Last Updated 7 ಸೆಪ್ಟೆಂಬರ್ 2021, 7:55 IST
ಅಕ್ಷರ ಗಾತ್ರ

ನವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಇನ್ನಷ್ಟು ಕಾಲಾವಕಾಶ ನೀಡಿದ್ದು, ವಿಚಾರಣೆಯನ್ನು ಸೆಪ್ಟೆಂಬರ್‌ 13ಕ್ಕೆ ಮುಂದೂಡಿದೆ.

ಸ್ವತಂತ್ರ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್‌. ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಮೂರ್ತಿಗಳ ಪೀಠ ಆಗಸ್ಟ್‌ 17ರಂದು ಕೇಂದ್ರಕ್ಕೆ ನೋಟಿಸ್‌ ನೀಡಿತ್ತು.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠದ ಎದುರು ಮಂಗಳವಾರ ಈ ಅರ್ಜಿ ವಿಚಾರಣೆಗೆ ಬಂದಿತು. ಈ ವೇಳೆ ಕೇಂದ್ರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕೆಲವು ತೊಂದರೆಗಳಿಂದಾಗಿ ನ್ಯಾಯಪೀಠ ಕೇಳಿರುವ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿಲ್ಲ. ಹಾಗಾಗಿ ಈ ಪ್ರಕರಣದ ವಿಚಾರಣೆಯನ್ನು ಗುರುವಾರ ಅಥವಾ ಸೋಮವಾರ ನಡೆಯುವ ವಿಚಾರಣೆ ಪಟ್ಟಿಯಲ್ಲಿ ಸೇರಿಸಲು ಮನವಿ ಮಾಡಿದರು.

ಪತ್ರಕರ್ತ ಎನ್‌. ರಾಮ್‌ ಪರ ಹಾಜರಾಗಿದ್ದ ವಕೀಲ ಕಪಿಲ್ ಸಿಬಲ್ ಅವರು ‘ಕೇಂದ್ರದ ಮನವಿಗೆ ಯಾವುದೇ ಆಕ್ಷೇಪಣೆಗಳಿಲ್ಲ‘ ಎಂದು ಹೇಳಿದರು. ನ್ಯಾಯಪೀಠ, ಪ್ರಕರಣವನ್ನು ಸೋಮವಾರ ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಲು ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT