ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ ಉಲ್ಲಂಘನೆ: ತಪ್ಪಿತಸ್ಥರಿಗೆ ಕರ್ನಾಟಕದಲ್ಲಿ ₹ 1 ಕೋಟಿ ದಂಡ

Last Updated 11 ಅಕ್ಟೋಬರ್ 2022, 17:59 IST
ಅಕ್ಷರ ಗಾತ್ರ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಸಲ್ಲಿಕೆಯಾದ ಅರ್ಜಿಗಳಿಗೆ ಪ್ರತಿಯಾಗಿ ಮಾಹಿತಿ ನೀಡದ ಪ್ರಕರಣಗಳಿಗೆ ಸಂಬಂಧಿಸಿ, 2021ರ ಜುಲೈ 1ರಿಂದ ಕಳೆದ ಜೂನ್‌ ವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ₹ 1.04 ಕೋಟಿ ದಂಡ ವಿಧಿಸಲಾಗಿದೆ.

1,265 ಪ್ರಕರಣಗಳಿಗೆ ಸಂಬಂಧಿಸಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗ ವಿಧಿಸಿರುವ ಈ ದಂಡದ ಮೊತ್ತವು, ದೇಶದಲ್ಲಿ ವಿಧಿಸಲಾದ ಒಟ್ಟು ದಂಡದ ಮೂರನೇ ಒಂದರಷ್ಟು ಎಂದು ಸತರ್ಕ ನಾಗರಿಕ ಸಂಘಟನೆ (ಎಸ್‌ಎನ್‌ಎಸ್‌) ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.

ಮಾಹಿತಿ ನೀಡದೇ, ಆರ್‌ಟಿಎ ಉಲ್ಲಂಘನೆ ಮಾಡಿದ್ದಕ್ಕಾಗಿ ದೇಶದಾದ್ಯಂತ 5,805 ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು ₹ 3.12 ಕೋಟಿ ದಂಡ ವಿಧಿಸಲಾಗಿದೆ. ಒಟ್ಟು ಪ್ರಕರಣಗಳ ಪೈಕಿ ಶೇ 5ರಷ್ಟು ಪ್ರಕರಣಗಳಲ್ಲಿ ಮಾತ್ರ ದಂಡ ವಿಧಿಸಲಾಗಿದೆ ಎಂದೂ ವರದಿಯಲ್ಲಿ ವಿವರಿಸಲಾಗಿದೆ.

ದಂಡ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿರುವ ಮಧ್ಯಪ್ರದೇಶದಲ್ಲಿ, ತಪ್ಪಿತಸ್ಥ ಅಧಿಕಾರಿಗಳಿಗೆ ಒಟ್ಟು ₹ 47.50 ಲಕ್ಷ ದಂಡ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT