ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದ ಜನರು ಸಂತೋಷದಿಂದಿಲ್ಲ: ಮೋಹನ್‌ ಭಾಗವತ್‌

Last Updated 31 ಮಾರ್ಚ್ 2023, 15:30 IST
ಅಕ್ಷರ ಗಾತ್ರ

ಭೋಪಾಲ್‌: ‘ಸ್ವಾತಂತ್ರ್ಯ ಲಭಿಸಿ ಏಳು ದಶಕಗಳು ಕಳೆದರೂ ಪಾಕಿಸ್ತಾನದ ಜನರು ಸಂತೋಷದಿಂದಿಲ್ಲ. ಭಾರತದ ವಿಭಜನೆಯು ಪ್ರಮಾದ ಎಂಬುದಾಗಿ ಅವರು ಈಗಲೂ ನಂಬಿದ್ದಾರೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್) ಸರಸಂಘಚಾಲಕ ಮೋಹನ್‌ ಭಾಗವತ್‌ ಶುಕ್ರವಾರ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಹೇಮು ಕಲಾನಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಬೇಕೆಂದು ನಾನು ಹೇಳುತ್ತಿಲ್ಲ. ಇತರರ ಮೇಲೆ ದಾಳಿಗೆ ಕರೆ ನೀಡುವ ಸಂಸ್ಕೃತಿಯನ್ನು ನಾವು ಹೊಂದಿಲ್ಲ’ ಎಂಬುದನ್ನು ಒತ್ತಿ ಹೇಳಿದರು.

‘ಆತ್ಮ ರಕ್ಷಣೆಗಾಗಿ ಸೂಕ್ತ ಪ್ರತ್ಯುತ್ತರ ನೀಡುವ ಸಂಸ್ಕೃತಿಯಿಂದ ನಾವು ಬಂದಿದ್ದೇವೆ’ ಎಂದು ಉಗ್ರರ ಶಿಬಿರಗಳ ಮೇಲೆ ನಡೆದಿದ್ದ ನಿರ್ದಿಷ್ಟ ದಾಳಿಯನ್ನು ಉಲ್ಲೇಖಿಸಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT