ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟ ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

Last Updated 20 ಮಾರ್ಚ್ 2023, 16:35 IST
ಅಕ್ಷರ ಗಾತ್ರ

ನವದೆಹಲಿ: ‘ಭ್ರಷ್ಟ ಬಿಜೆಪಿ ಸರ್ಕಾರದ ಶೋಷಣೆಗಳನ್ನು ಜನರು ನೋಡುತ್ತಿದ್ದಾರೆ. ಕಾಲ ಬಂದಾಗ ಉತ್ತರಿಸುತ್ತಾರೆ’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮಹಿಳೆಯರು ಈಗಲೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ’ ಎಂಬ ರಾಹುಲ್‌ ಗಾಂಧಿ ಅವರ ಹೇಳಿಕೆ ವಿಚಾರವಾಗಿ ದೆಹಲಿ ಪೊಲೀಸರು ಭಾನುವಾರ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಟ್ವೀಟ್‌ ಮೂಲಕ ಕೇಂದ್ರದ ವಿರುದ್ಧ ಹರಿಹಾಯ್ದಿದಿದ್ದಾರೆ.

‘ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರು, ದಲಿತರು, ಬಡವರು, ಆದಿವಾಸಿಗಳು, ರೈತರು ಮತ್ತು ಯುವ ಜನತೆಯ ಪರವಾಗಿ ಧ್ವನಿ ಎತ್ತಿದ್ದಕ್ಕೆ ರಾಹುಲ್‌ ಗಾಂಧಿಗೆ ನೋಟಿಸ್‌ ನೀಡಲಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರದ ಶೋಷಣೆಯನ್ನು ಜನರು ಗಮನಿಸುತ್ತಿದ್ದಾರೆ. ಕಾಲ ಬಂದಾಗ ಉತ್ತರಿಸುತ್ತಾರೆ ’ ಎಂದು ಟ್ವೀಟ್‌ ಮಾಡಿದ್ದಾರೆ.

‘38 ವಿದೇಶಿ ಶೆಲ್‌ ಕಂಪನಿಗಳೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿರುವ ಆರೋಪಿ, ಪ್ರಧಾನಿ ಸ್ನೇಹಿತ ಗೌತಮ್ ಅದಾನಿಗೆ ನೋಟಿಸ್ ನೀಡಿಲ್ಲ. ಅದಾನಿ ಮೂಲಕ ರಕ್ಷಣಾ ವಲಯಕ್ಕೆ ನಕಲಿ ಕಂಪನಿಗಳು ಒಳನುಸುಳಿರುವುದಕ್ಕೂ ನೋಟಿಸ್‌ ಇಲ್ಲ. ಅದಾನಿಗೆ ಅನುಕೂಲ ಮಾಡಿಕೊಡಲು ನಿಯಮ ಬದಲಾಯಿಸಿದ ಪ್ರಕರಣದಲ್ಲಿ ಸರ್ಕಾರವೇ ಆರೋಪಿ ಸ್ಥಾನದಲ್ಲಿದೆ’ ಎಂದು ಅವರು ಕಿಡಿಕಾರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT