ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ರಾಜ್ಯಗಳ ಚುನಾವಣೆಯಲ್ಲಿ ಜನರು ಮತ್ತೆ ಬಿಜೆಪಿಯನ್ನು ಆಶೀರ್ವದಿಸಲಿದ್ದಾರೆ: ನಡ್ಡಾ

Last Updated 8 ಜನವರಿ 2022, 15:26 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದನ್ನು ಸ್ವಾಗತಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ದೊಡ್ಡ ಬಹುಮತದೊಂದಿಗೆ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅತ್ಯಧಿಕ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳನ್ನು ಎತ್ತರಕ್ಕೆ ಕೊಂಡೊಯ್ಯುವ ಬಿಜೆಪಿಗೆ ಜನರು ಮತ್ತೊಮ್ಮೆ ಆಶೀರ್ವಾದ ಮಾಡಲಿದ್ದಾರೆ ಎಂದಿದ್ದಾರೆ.

ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿರುವ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ಸೇರಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದು, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಮತ್ತು ಶಿರೋಮಣಿ ಅಕಾಲಿ ದಳದ ಜೊತೆ ಮೈತ್ರಿ ಮಾಡಿಕೊಂಡು ತನ್ನ ಪ್ರತಿಸ್ಪರ್ಧಿಗಳನ್ನು ಎದುರಿಸಲು ಹೋರಾಡುತ್ತಿದೆ.

ಕೋವಿಡ್ ಸಂಬಂಧಿತ ಮತ್ತು ಚುನಾವಣೆ ಸಂಸ್ಥೆಯು ನಿಗದಿಪಡಿಸಿದ ಇತರ ಮಾರ್ಗಸೂಚಿಗಳಿಗೆ ಬದ್ಧರಾಗಿ ತಮ್ಮ ಸಂಪೂರ್ಣ ಶಕ್ತಿಯೊಂದಿಗೆ ಪ್ರಜಾಪ್ರಭುತ್ವದ ಈ ಮಹಾ ಹಬ್ಬದಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ನಡ್ಡಾ ಕರೆ ನೀಡಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮಾತನಾಡಿ, 'ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ತನ್ನೆಲ್ಲ ಶಕ್ತಿಯೊಂದಿಗೆ ಸ್ಪರ್ಧಿಸುತ್ತದೆ ಮತ್ತು ದೊಡ್ಡ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫೆ. 10 ರಿಂದ ಮಾ. 7ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾ. 10 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT